wheel

AJC Publications and Media Portal

 

But the Comforter, which is the Holy Ghost, whom the Father will send in my name, he shall teach you all things,
and bring all things to your remembrance, whatsoever I have said unto you. John 14:26


1 ಕೊರಿಂಥದವರಿಗೆ ंಅಧ್ಯಾಯ 6
  • 1 ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?
  • 2 ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
  • 3 ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
  • 4 ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
  • 5 ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
  • 6 ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.
  • 7 ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
  • 8 ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
  • 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
  • 10 ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
  • 11 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
  • 12 ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
  • 13 ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
  • 14 ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
  • 15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
  • 16 ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
  • 17 ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
  • 18 ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
  • 19 ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;
  • 20 ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.