- 1 ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
- 2 ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
- 3 ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
- 4 ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
- 5 ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- 6 ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- 7 ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
- 8 ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- 9 ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- 10 ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- 11 ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- 12 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- 13 ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- 14 ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- 15 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
- 16 ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- 17 ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
- 18 ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
- 19 ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
- 20 ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- 21 ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- 22 ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- 23 ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
- 24 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- 25 ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 26 ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 27 ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 28 ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- 29 ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
- 30 ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
- 31 ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 32 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.
- 33 ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
1 Corinthians 10
- Details
- Parent Category: New Testament
- Category: 1 Corinthians
1 ಕೊರಿಂಥದವರಿಗೆ ं ಅಧ್ಯಾಯ 10