- 1 ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- 2 ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 3 ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
- 4 ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- 5 ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
- 6 ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
- 7 ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- 8 ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
- 9 ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
- 10 ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
- 11 ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- 12 ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 13 ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 14 ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- 15 ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- 16 ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 17 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- 18 ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
- 19 ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
- 20 ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 21 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
- 22 ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- 23 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
- 24 ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
1 Corinthians 16
- Details
- Parent Category: New Testament
- Category: 1 Corinthians
1 ಕೊರಿಂಥದವರಿಗೆ ं ಅಧ್ಯಾಯ 16