- 1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- 2 ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 3 ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- 4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
- 5 ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
- 6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
- 7 ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- 8 ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- 9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- 10 ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- 11 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- 12 ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
- 13 ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
- 14 ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- 15 ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- 16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- 17 ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
- 18 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
- 19 ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- 20 ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.
- 21 ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
2 Peter 01
- Details
- Parent Category: New Testament
- Category: 2 Peter
2 ಪೇತ್ರನು ಅಧ್ಯಾಯ 1