- 1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
- 2 ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
- 3 ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- 4 ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- 5 ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
- 6 ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
- 7 ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
- 8 ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- 9 ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- 10 ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- 11 ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- 13 ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- 14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 15 ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
- 16 ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂ
- 17 ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
2 Thessalonians 02
- Details
- Parent Category: New Testament
- Category: 2 Thessalonians
2 ಥೆಸಲೊನೀಕದವರಿಗೆ ಅಧ್ಯಾಯ 2