- 1 ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- 2 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 3 ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 4 ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 5 ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- 6 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
- 7 ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
- 8 ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
- 9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- 10 ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 11 ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
- 12 ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- 13 ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- 14 ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
- 15 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
- 16 ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- 17 ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- 18 ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- 19 ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 20 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- 21 ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- 22 ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- 23 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
- 24 ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- 25 ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.
- 26 ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
2 Timothy 02
- Details
- Parent Category: New Testament
- Category: 2 Timothy
2 ತಿಮೊಥೆಯನಿಗೆ ಅಧ್ಯಾಯ 2