- 1 ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
- 2 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
- 3 ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- 4 ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
- 5 ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- 6 ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
- 7 ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
- 8 ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- 9 ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- 10 ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- 11 ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- 12 ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- 13 ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- 14 ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
- 15 ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- 16 ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- 17 ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
2 Timothy 03
- Details
- Parent Category: New Testament
- Category: 2 Timothy
2 ತಿಮೊಥೆಯನಿಗೆ ಅಧ್ಯಾಯ 3