- 1 ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- 2 ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
- 3 ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
- 4 ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- 5 ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
- 6 ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- 7 ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- 8 ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
- 9 ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- 10 ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- 11 ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- 12 ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 13 ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- 14 ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
- 15 ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
- 16 ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
- 17 ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
- 18 ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
- 19 ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- 20 ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- 21 ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- 22 ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- 23 ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
- 24 ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
- 25 ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
- 26 ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
- 27 ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- 28 ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 29 ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- 30 ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- 31 ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 32 ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- 33 ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
- 34 ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
- 35 ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
- 36 ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)
- 37 ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Acts 04
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 4