- 1 ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
- 2 ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- 3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
- 4 ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- 5 ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- 6 ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- 7 ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
- 8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
- 9 ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
- 10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- 11 ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 12 ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
- 13 ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- 14 ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- 15 ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- 18 ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
- 19 ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
- 20 ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- 21 ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- 22 ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
- 23 ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
- 24 ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- 25 ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- 26 ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
- 27 ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
- 28 ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
- 29 ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
- 30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- 31 ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- 32 ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
- 33 ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
- 34 ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- 35 ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
- 36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- 37 ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
- 38 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
- 39 ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- 40 ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- 41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- 42 ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.
- 43 ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
Acts 09
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 9