- 1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- 2 ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- 3 ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- 4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
- 5 ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
- 6 ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
- 7 ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
- 8 ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
- 9 ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
- 10 ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- 11 ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- 12 ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
- 13 ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- 14 ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- 15 ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- 16 ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- 17 ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
- 18 ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
- 19 ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
- 20 ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
- 21 ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
- 22 ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- 23 ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- 24 ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
- 25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- 26 ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- 27 ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- 28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
- 29 ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- 30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
- 31 ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
- 32 ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
- 33 ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
- 34 ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
- 35 ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
- 36 ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- 37 ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- 38 ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- 39 ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- 40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
- 41 ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- 42 ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
- 43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- 44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
- 45 ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- 46 ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- 47 ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- 48 ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- 49 ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
- 50 ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- 51 ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.
- 52 ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Acts 13
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 13