- 1 ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
- 2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- 3 ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- 4 ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
- 5 ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- 6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- 7 ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- 8 ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
- 9 ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
- 10 ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
- 11 ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- 12 ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
- 13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- 14 ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
- 15 ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
- 16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
- 17 ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
- 18 ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- 19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
- 20 ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
- 21 (ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
- 22 ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
- 23 ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
- 24 ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
- 25 ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- 26 ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- 27 ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
- 28 ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- 29 ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- 30 ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- 31 ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 32 ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- 33 ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
- 34 ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Acts 17
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 17