- 1 ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
- 2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- 3 ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- 4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- 5 ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- 6 ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- 7 ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
- 8 ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
- 9 ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
- 10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- 11 ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
- 12 ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 13 ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 14 ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
- 15 ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- 16 ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
- 17 ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- 18 ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- 19 ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
- 20 ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
- 21 ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
- 22 ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- 23 ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- 24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
- 25 ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- 26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
- 27 ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;
- 28 ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Acts 18
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 18