- 1 ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- 2 ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
- 3 ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
- 4 ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- 5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- 6 ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- 7 ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
- 8 ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
- 9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
- 10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- 11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
- 12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- 13 ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
- 14 ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
- 15 ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
- 16 ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
- 17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
- 18 ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
- 19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
- 20 ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- 21 ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- 22 ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- 23 ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
- 24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
- 25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
- 26 ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- 27 ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
- 28 ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
- 29 ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
- 30 ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
- 31 ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
- 32 ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
- 33 ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
- 34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
- 35 ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
- 36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
- 37 ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
- 38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
- 39 ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
- 40 ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
- 41 ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Acts 19
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 19