- 1 ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2 ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
- 3 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
- 4 ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
- 5 ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
- 6 ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- 7 ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
- 8 ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
- 9 (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
- 10 ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- 11 ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 12 ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- 13 ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- 14 ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 15 ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
- 16 ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 17 ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- 18 ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- 19 ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- 20 ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.
- 21 ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
- 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- 23 ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
- 24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 25 ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- 26 ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- 27 ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- 28 ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- 29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 30 ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.
- 32 ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Ephesians 04
- Details
- Parent Category: New Testament
- Category: Ephesians
ಎಫೆಸದವರಿಗೆ ಅಧ್ಯಾಯ 4