- 1 ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- 2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 3 ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- 4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
- 5 ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.
- 6 ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- 7 ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
- 8 ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- 9 ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- 10 ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 11 ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
- 12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
- 13 ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
- 14 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
- 15 ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- 16 ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- 17 ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.
- 18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Galatians 06
- Details
- Parent Category: New Testament
- Category: Galatians
ಗಲಾತ್ಯದವರಿಗೆ ಅಧ್ಯಾಯ 6