- 1 ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
- 2 ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- 3 ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- 4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- 5 ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- 6 ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
- 7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- 8 ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- 9 ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- 10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- 11 ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
- 12 ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- 13 ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
- 14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- 15 ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- 16 ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
- 17 ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
- 18 ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
- 19 ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- 20 ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
- 21 ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
- 22 ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- 23 ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- 24 ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- 25 ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
- 26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- 27 ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.
- 28 ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Hebrews 09
- Details
- Parent Category: New Testament
- Category: Hebrews
ಇಬ್ರಿಯರಿಗೆ ಅಧ್ಯಾಯ 9