- 1 ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- 2 ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.
- 3 ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- 4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
- 5 ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
- 6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 8 ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- 9 ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
- 10 ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- 11 ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
- 12 ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
- 13 ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- 14 ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.
- 15 ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
- 16 ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- 17 ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
- 18 ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
- 19 ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- 20 ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
- 21 ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
- 22 ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
- 23 ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
- 24 ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
- 25 ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
- 26 ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- 27 ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- 28 ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- 29 ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- 30 ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
- 31 ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- 32 ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‌ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
- 33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- 34 ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- 35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
- 36 ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
- 37 ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
- 38 ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- 39 ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;
- 40 ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Hebrews 11
- Details
- Parent Category: New Testament
- Category: Hebrews
ಇಬ್ರಿಯರಿಗೆ ಅಧ್ಯಾಯ 11