- 1 ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- 2 ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- 3 ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- 5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- 6 ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- 7 ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
- 8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
- 9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- 10 ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- 11 ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- 12 ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- 13 ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- 14 ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 15 ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- 16 ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
- 17 ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- 18 ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
- 19 ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
- 20 (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
- 21 ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
- 22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- 23 ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- 24 ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- 25 ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- 26 ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- 27 ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- 28 ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.
- 29 ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Hebrews 12
- Details
- Parent Category: New Testament
- Category: Hebrews
ಇಬ್ರಿಯರಿಗೆ ಅಧ್ಯಾಯ 12