- 1 ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
- 2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- 3 ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.
- 4 ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
- 5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
- 6 ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- 7 ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
- 8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- 9 ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- 10 ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- 11 ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
- 12 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
- 13 ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- 14 ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
- 15 ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
- 16 ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- 17 ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
- 18 ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
James 03
- Details
- Parent Category: New Testament
- Category: James
ಯಾಕೋಬನು ಅಧ್ಯಾಯ 3