- 1 ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
- 2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- 3 ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
- 4 ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
- 5 ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
- 6 ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
- 7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- 8 ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
- 9 ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
- 10 ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
- 11 ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
- 12 ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- 13 ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
- 14 ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
- 15 ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
- 16 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
- 17 ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- 18 ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- 19 ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
- 20 ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
- 21 ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
- 22 ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
- 23 ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- 24 ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- 25 ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
- 26 ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
- 27 ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
- 28 ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
- 29 ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
- 30 ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
- 31 ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- 32 ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
- 33 ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
- 34 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
- 35 ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
- 36 ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
- 37 ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- 38 ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- 39 (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- 40 ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
- 41 ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- 42 ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- 43 ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
- 44 ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
- 45 ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
- 46 ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- 47 ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
- 48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
- 49 ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
- 50 ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
- 51 ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- 52 ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.
- 53 ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
John 07
- Details
- Parent Category: New Testament
- Category: John
ಯೋಹಾನನು ಅಧ್ಯಾಯ 7