- 1 ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
- 2 ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
- 3 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
- 4 ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
- 5 ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
- 6 ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
- 7 ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
- 8 ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
- 9 ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- 10 ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- 11 ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12 ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- 14 ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- 15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- 16 ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- 17 ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- 18 ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
- 19 ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- 20 ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
- 21 ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
- 22 ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- 23 ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- 24 ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
- 25 ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
- 26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- 27 ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- 28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- 29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- 30 ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- 31 ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
- 32 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
- 33 ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
- 34 ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
- 35 ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- 36 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- 37 ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
- 38 ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- 39 ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
- 40 ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
- 41 ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
- 42 ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
- 43 ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
- 44 ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
- 45 ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
- 46 ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
- 47 ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
- 48 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
- 49 ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Luke 06
- Details
- Parent Category: New Testament
- Category: Luke
ಲೂಕನು ಅಧ್ಯಾಯ 6