- 1 ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
- 2 ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
- 3 ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
- 4 ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
- 5 ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
- 6 ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
- 7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
- 8 ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
- 9 ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
- 10 ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
- 11 ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
- 12 ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
- 13 ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- 14 ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
- 15 ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
- 16 ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- 17 ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- 18 ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
- 19 ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
- 20 ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
- 21 ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
- 22 ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- 23 ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
- 24 ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
- 25 ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
- 26 ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- 27 ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- 28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
- 29 ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
- 30 ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
- 31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
- 32 ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
- 33 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
- 34 ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
- 35 ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
- 36 ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- 37 ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
- 38 ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
- 39 ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
- 40 ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
- 41 ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
- 42 ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- 43 ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
- 44 ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
- 45 ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
- 46 ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
- 47 ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
- 48 ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- 49 ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
- 50 ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- 51 ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- 52 ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
- 53 ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
- 54 ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
- 55 ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
- 56 ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
- 57 ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
- 58 ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
- 59 ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
- 60 ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
- 61 ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.
- 62 ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Luke 09
- Details
- Parent Category: New Testament
- Category: Luke
ಲೂಕನು ಅಧ್ಯಾಯ 9