- 1 ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
- 2 ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
- 3 ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
- 4 ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
- 5 ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
- 6 ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
- 7 ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
- 8 ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
- 9 ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
- 10 ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
- 11 ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
- 12 ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
- 13 ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
- 14 ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
- 15 ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
- 16 ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
- 17 ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
- 18 ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- 19 ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- 20 ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
- 21 ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- 22 ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
- 23 ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
- 24 ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
- 25 ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
- 26 ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
- 27 ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- 28 ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
- 29 ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- 30 ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- 31 ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
- 32 ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- 33 ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- 34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
- 35 ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
- 36 ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 37 ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Luke 17
- Details
- Parent Category: New Testament
- Category: Luke
ಲೂಕನು ಅಧ್ಯಾಯ 17