- 1 ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- 2 ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
- 3 ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
- 4 ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- 5 ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
- 6 ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
- 7 ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- 8 ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- 9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
- 10 ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
- 11 ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- 12 ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- 13 ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- 14 ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 15 ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
- 16 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
- 17 ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 18 ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
- 19 ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
- 20 ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- 21 ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
- 22 ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- 23 ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
- 24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
- 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
- 26 ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
- 27 ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
- 28 ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
- 29 ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
- 30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- 31 ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
- 32 ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
- 33 ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- 34 ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
- 35 ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
- 36 ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
- 37 ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
- 38 ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- 39 ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- 40 ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
- 41 ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
- 42 ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.
- 43 ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Luke 18
- Details
- Parent Category: New Testament
- Category: Luke
ಲೂಕನು ಅಧ್ಯಾಯ 18