- 1 ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
- 2 ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- 3 ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
- 4 ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
- 5 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
- 6 ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- 7 ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
- 8 ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
- 9 ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
- 10 ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
- 11 ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
- 12 ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
- 13 ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
- 14 ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
- 15 ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
- 16 ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 17 ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
- 18 ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
- 19 ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
- 20 ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- 21 ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
- 22 ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
- 23 ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
- 24 ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
- 25 ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
- 26 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
- 27 ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- 28 ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
- 29 ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
- 30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- 31 ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- 32 ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 33 ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
- 34 ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- 35 ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
- 36 ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
- 37 ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 38 ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
- 39 ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- 40 ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- 41 ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- 42 ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
- 43 ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- 44 ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- 45 ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
- 46 ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- 47 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
- 48 ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- 49 ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
- 50 ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
- 51 ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- 52 ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
- 53 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- 54 ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
- 55 ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
- 56 ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
- 57 ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
- 58 ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
- 59 ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
- 60 ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
- 61 ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
- 62 ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- 63 ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
- 64 ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
- 65 ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
- 66 ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- 67 ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
- 68 ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
- 69 ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
- 70 ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
- 71 ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
Luke 22
- Details
- Parent Category: New Testament
- Category: Luke
ಲೂಕನು ಅಧ್ಯಾಯ 22