- 1 ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
- 2 ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
- 3 ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
- 4 ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- 5 ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- 6 ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
- 7 ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- 8 ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
- 9 ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
- 10 ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- 11 ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
- 12 ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
- 13 ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
- 14 ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
- 15 ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
- 16 ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
- 17 ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
- 18 ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
- 19 ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
- 20 ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
- 21 ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
- 22 ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
- 23 ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
- 24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
- 25 ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- 26 ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- 27 ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- 28 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
- 29 ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
- 30 ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- 31 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
- 32 ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
- 33 ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
- 34 ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
- 35 ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
- 36 ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
- 37 ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
- 38 ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
- 39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
- 40 ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
- 41 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
- 42 ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
- 43 ಆತನು ತಕ್ಕೊಂಡು ಅವರ ಮುಂದೆ ತಿಂದನು.
- 44 ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- 45 ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- 46 ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- 47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- 48 ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
- 49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- 50 ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- 51 ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
- 52 ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
- 53 ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
Luke 24
- Details
- Parent Category: New Testament
- Category: Luke
ಲೂಕನು ಅಧ್ಯಾಯ 24