- 1 ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
- 2 ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
- 3 ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
- 4 ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- 5 ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- 6 ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
- 7 ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
- 8 ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
- 9 ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
- 10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- 11 ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- 12 ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- 13 ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
- 14 ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
- 15 ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
- 16 ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
- 17 ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
- 18 ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- 19 ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- 20 ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
- 21 ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- 22 ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 23 ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
- 24 ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
- 25 ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
- 26 ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
- 27 ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
- 28 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
- 29 ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
- 30 ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
- 31 ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
- 32 ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
- 33 ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
- 34 ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!
- 35 ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Mark 03
- Details
- Parent Category: New Testament
- Category: Mark
ಮಾರ್ಕನು ಅಧ್ಯಾಯ 3