- 1 ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
- 2 ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
- 3 ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
- 4 ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
- 5 ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
- 6 ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
- 7 ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
- 8 ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.
- 9 ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
- 10 ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
- 11 ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
- 12 ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
- 13 ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು.
- 14 ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- 15 ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- 16 ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
- 17 ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
- 18 ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
- 19 ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
- 20 ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- 21 ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
- 22 ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
- 23 ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
- 24 ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
- 25 ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
- 26 ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
- 27 ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
- 28 ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು.
- 29 ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- 30 ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
- 31 ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
- 32 ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- 33 ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 34 ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- 35 ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.
- 36 ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
- 37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
- 38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
- 39 ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- 40 ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
- 41 (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- 42 ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
- 43 ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
- 44 ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
- 45 ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
- 46 ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.
- 47 ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Mark 15
- Details
- Parent Category: New Testament
- Category: Mark
ಮಾರ್ಕನು ಅಧ್ಯಾಯ 15