- 1 ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
- 2 ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
- 3 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 4 ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- 5 ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
- 6 ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- 7 ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
- 8 ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- 9 ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- 10 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 11 ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- 12 ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 13 ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- 14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
- 15 ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
- 16 ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- 17 ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
- 18 ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 19 ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
- 20 ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- 21 ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
- 22 ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- 23 ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
- 24 ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
- 25 ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- 26 ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
- 27 ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
- 28 ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- 29 ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- 30 ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- 31 ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
- 32 ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
- 33 ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
- 34 ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
- 35 ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
- 36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
- 37 ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
- 38 ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
- 39 ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- 40 ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
- 41 ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
- 42 ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- 43 ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
- 44 ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- 45 ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- 46 ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
- 47 ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?
- 48 ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Matthew 05
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 5