- 1 ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
- 2 ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- 3 ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
- 4 ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
- 5 ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
- 6 ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- 7 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- 8 ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- 9 ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
- 10 ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
- 11 ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- 12 ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- 13 ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- 14 ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- 15 ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 16 ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
- 17 ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
- 18 ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
- 19 ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
- 20 ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
- 21 ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- 22 ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
- 23 ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- 24 ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- 25 ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- 26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- 27 ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- 28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.
- 29 ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Matthew 07
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 7