- 1 ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
- 2 ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- 3 ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
- 4 ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- 5 ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- 6 ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
- 7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
- 8 ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- 9 ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 10 ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
- 11 ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- 12 ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
- 13 ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
- 14 ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
- 15 ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
- 16 ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
- 17 ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- 18 ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
- 19 ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
- 20 ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- 21 ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
- 22 ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- 23 ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
- 24 ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
- 25 ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
- 26 ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
- 27 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
- 28 ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- 29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- 30 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
- 31 ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
- 32 ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
- 33 ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
- 34 ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 35 ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- 36 ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- 37 ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.
- 38 ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Matthew 09
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 9