- 1 ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- 2 ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- 3 ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
- 4 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
- 5 ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
- 6 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- 7 ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
- 8 ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
- 9 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- 10 ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
- 11 ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- 12 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- 13 ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
- 14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
- 15 ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- 16 ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- 17 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- 18 ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
- 19 ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 20 ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
- 21 ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 22 ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- 23 ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- 24 ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- 25 ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
- 26 ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
- 27 ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
- 28 ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
- 29 ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
- 30 ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- 31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
- 32 ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- 33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 34 ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
- 35 ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- 36 ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
- 37 ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- 38 ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- 39 ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- 40 ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
- 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 43 ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 44 ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- 45 ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
- 46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
- 47 ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
- 48 ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- 49 ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 50 ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 51 ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- 52 ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 53 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
- 54 ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- 55 ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- 56 ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- 57 ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.
- 58 ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Matthew 13
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 13