- 1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- 2 ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
- 3 ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
- 4 ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- 5 ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
- 6 ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- 7 ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
- 8 ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 9 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- 10 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- 11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- 12 ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- 13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
- 14 ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
- 15 ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
- 16 ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- 17 ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- 18 ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- 19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- 20 ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
- 21 ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- 22 ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- 23 ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 24 ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 25 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- 26 ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- 27 ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.
- 28 ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
Matthew 16
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 16