- 1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- 2 ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- 3 ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.
- 4 ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
- 5 ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- 6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
- 7 ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- 8 ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
- 9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- 10 ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- 11 ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
- 12 ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 13 ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
- 14 ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
- 15 ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
- 16 ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
- 17 ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- 18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
- 19 ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
- 20 ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- 21 ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
- 22 ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
- 23 ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
- 24 ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
- 25 ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
- 26 ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.
- 27 ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
Matthew 17
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 17