- 1 ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
- 2 ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
- 3 ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
- 4 ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
- 5 ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- 6 ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
- 7 ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
- 8 ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
- 9 ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
- 10 ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- 11 ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
- 12 ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 13 ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- 14 ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
- 15 ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
- 16 ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
- 17 ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
- 18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
- 19 ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
- 20 ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
- 21 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- 22 ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
- 23 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- 24 ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
- 25 ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
- 26 ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
- 27 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
- 28 ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
- 29 ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- 30 ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
- 31 ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- 32 ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- 33 ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
- 34 ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 35 ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- 36 ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
- 37 ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
- 38 ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
- 39 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
- 40 ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 41 ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- 42 ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
- 43 ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
- 44 ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
- 45 ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
- 46 ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Matthew 25
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 25