- 1 ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- 2 ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- 3 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
- 4 ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 5 ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- 6 ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
- 7 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
- 8 ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
- 9 ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
- 10 ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
- 11 ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
- 12 ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
- 13 ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
- 14 ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- 15 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
- 16 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
- 17 ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
- 18 ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- 19 ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- 20 ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
- 21 ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
- 22 ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- 23 ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- 24 ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- 25 ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- 26 ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- 27 ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
- 28 ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
- 29 ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- 30 ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
- 31 ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
- 32 ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
- 33 ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
- 34 ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- 35 ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
- 36 ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
- 37 ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
- 38 ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
- 39 ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- 40 ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- 41 ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
- 42 ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
- 43 ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- 44 ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- 45 ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 46 ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- 47 ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
- 48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
- 49 ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
- 50 ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
- 51 ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- 52 ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
- 53 ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- 54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- 55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
- 56 ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- 57 ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
- 58 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
- 59 ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
- 60 ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- 61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- 62 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
- 63 ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- 64 ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- 65 ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.
- 66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
Matthew 27
- Details
- Parent Category: New Testament
- Category: Matthew
ಮತ್ತಾಯನು ಅಧ್ಯಾಯ 27