- 1 ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- 2 ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
- 3 ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- 4 ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
- 5 ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- 6 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 7 ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- 8 ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
- 9 ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- 10 ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- 11 ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- 12 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- 13 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 14 ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
- 15 ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.
- 16 ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
- 17 ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- 18 ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- 19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- 20 ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- 21 ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.
- 22 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Revelation 03
- Details
- Parent Category: New Testament
- Category: Revelation
ಪ್ರಕಟನೆ ಅಧ್ಯಾಯ 3