- 1 ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
- 2 ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
- 3 ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- 4 ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
- 5 ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 6 ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 7 ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
- 8 ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- 9 ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- 10 ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- 11 ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
- 12 ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- 13 ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
- 14 ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- 15 ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
- 16 ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.
- 17 ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
Revelation 07
- Details
- Parent Category: New Testament
- Category: Revelation
ಪ್ರಕಟನೆ ಅಧ್ಯಾಯ 7