- 1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- 2 ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- 3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- 4 ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
- 5 ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 6 ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
- 7 ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
- 8 ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 9 ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
- 10 ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- 11 ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- 12 ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- 13 (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
- 14 ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
- 15 ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
- 16 ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
- 17 ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
- 18 ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
- 19 ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
- 20 ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
- 21 ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Romans 05
- Details
- Parent Category: New Testament
- Category: Romans
ರೋಮಾಪುರದವರಿಗೆ ಅಧ್ಯಾಯ 5