- 1 ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
- 2 ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- 3 ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?
- 4 ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
- 5 ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- 6 ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- 7 ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- 8 (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- 9 ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
- 10 ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- 11 ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
- 12 ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
- 13 ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
- 14 ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- 15 ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
- 16 ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
- 17 ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- 18 ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
- 19 ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ.
- 20 ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 21 ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
- 22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
- 23 ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
- 24 ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- 25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- 26 ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- 27 ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
- 28 ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
- 29 ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- 30 ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
- 31 ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
- 32 ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- 33 ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- 34 ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- 35 ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
- 36 ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
Romans 11
- Details
- Parent Category: New Testament
- Category: Romans
ರೋಮಾಪುರದವರಿಗೆ ಅಧ್ಯಾಯ 11