- 1 ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
- 2 ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
- 3 ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
- 4 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
- 5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
- 6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
- 7 ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- 9 ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- 10 ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- 11 ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- 12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- 13 ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
- 14 ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
Romans 13
- Details
- Parent Category: New Testament
- Category: Romans
ರೋಮಾಪುರದವರಿಗೆ ಅಧ್ಯಾಯ 13