- 1 ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
- 2 ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
- 3 ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- 4 ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
- 5 ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;
- 6 ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;
- 7 ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.
- 8 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
- 9 ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;
- 10 ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
- 11 ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;
- 12 ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
- 13 ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
- 14 ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- 15 ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
- 16 ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.
- 17 ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.
- 18 ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
- 19 ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
- 20 ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
- 21 ಇವನ ಮಗನಾದ ಯೆವತ್ರೈಯನು.
- 22 ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;
- 23 ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;
- 24 ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.
- 25 ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.
- 26 ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;
- 27 ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.
- 28 ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.
- 29 ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
- 30 ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
- 31 ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
- 32 ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
- 33 ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- 34 ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
- 35 ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,
- 36 ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,
- 37 ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು
- 38 ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
- 39 ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
- 40 ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
- 41 ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,
- 42 ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,
- 43 ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.
- 44 ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,
- 45 ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,
- 46 ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು,
- 47 ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.
- 48 ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- 49 ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
- 50 ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
- 51 ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,
- 52 ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,
- 53 ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
- 54 ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
- 55 ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
- 56 ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
- 57 ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- 58 ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
- 59 ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
- 60 ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- 61 ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 62 ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 63 ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.
- 64 ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
- 65 ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
- 66 ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
- 67 ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
- 68 ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್‌ಹೋ ರೋನನ್ನೂ ಅದರ ಉಪನಗರಗಳನ್ನೂ,
- 69 ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
- 70 ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
- 71 ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ,
- 72 ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
- 73 ಆನೇಮೂ ಅದರ ಉಪನಗರಗಳೂ,
- 74 ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
- 75 ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,
- 76 ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
- 77 ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
- 78 ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
- 79 ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್‌ಅದರ ಉಪನಗರಗಳೂ;
- 80 ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,
- 81 ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
1 Chronicles 06
- Details
- Parent Category: Old Testament
- Category: 1 Chronicles
1 ಪೂರ್ವಕಾಲವೃತ್ತಾ ಅಧ್ಯಾಯ 6