- 1 ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- 2 ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
- 3 ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
- 4 ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
- 5 ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- 6 ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- 7 ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ
- 8 ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ,
- 9 ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ,
- 10 ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,
- 11 ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,
- 12 ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ,
- 13 ಹದಿನಾಲ್ಕನೆಯದು ಎಫೆಬಾಬನಿಗೆ,
- 14 ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
- 15 ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ,
- 16 ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,
- 17 ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,
- 18 ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.
- 19 ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- 20 ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.
- 21 ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.
- 22 ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.
- 23 ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
- 24 ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.
- 25 ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.
- 26 ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.
- 27 ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.
- 28 ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.
- 29 ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.
- 30 ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.
- 31 ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
1 Chronicles 24
- Details
- Parent Category: Old Testament
- Category: 1 Chronicles
1 ಪೂರ್ವಕಾಲವೃತ್ತಾ ಅಧ್ಯಾಯ 24