- 1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;
- 3 ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
- 4 ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
- 5 ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
- 6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
- 7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.
- 8 ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
- 9 ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.
- 10 ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- 11 ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
- 12 ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
- 13 ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 14 ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
- 15 ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
- 16 ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
- 17 ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
- 18 ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
- 19 ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
- 20 ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
- 21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
- 22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
- 23 ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
- 24 ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
- 25 ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
- 26 ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
- 27 ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
- 28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 29 ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
- 30 ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- 31 ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
- 32 ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
- 33 ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
- 34 ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
- 35 ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
- 36 ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
- 37 ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
- 38 ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
- 39 ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
- 40 ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.
- 41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
- 42 ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.
- 43 ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
1 Kings 20
- Details
- Parent Category: Old Testament
- Category: 1 Kings
1 ಅರಸುಗಳು ಅಧ್ಯಾಯ 20