- 1 ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
- 2 ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
- 3 ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
- 4 ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- 5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.
- 6 ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
- 7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 8 ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
- 9 ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
- 10 ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- 11 ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
- 12 ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.
- 13 ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 14 ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
- 15 ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
- 16 ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
- 17 ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
- 18 ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
- 19 ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- 20 ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- 21 ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
- 22 ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
- 23 ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
- 24 ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- 25 ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- 26 ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
- 27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- 28 ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--
- 29 ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
1 Kings 21
- Details
- Parent Category: Old Testament
- Category: 1 Kings
1 ಅರಸುಗಳು ಅಧ್ಯಾಯ 21