- 1 ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
- 2 ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
- 3 ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- 4 ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
- 5 ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
- 6 ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
- 7 ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
- 8 ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
- 9 ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
- 10 ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
- 11 ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- 12 ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
- 13 ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
- 14 ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
- 15 ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
- 16 ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
- 17 ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- 18 ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
- 19 ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
- 20 ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
- 21 ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
- 22 ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- 23 ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- 24 ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- 25 ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
- 26 ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
- 27 ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
- 28 ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- 29 ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- 30 ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
- 31 ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
- 32 ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
- 33 ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
- 34 ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.
- 35 ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
1 Samuel 15
- Details
- Parent Category: Old Testament
- Category: 1 Samuel
1 ಸಮುವೇಲನು ಅಧ್ಯಾಯ 15