- 1 ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
- 2 ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- 3 ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
- 4 ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
- 5 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- 6 ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
- 7 ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
- 8 ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
- 9 ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
- 10 ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
- 11 ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
- 12 ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
- 13 ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
- 14 ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
- 15 ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
- 16 ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 17 ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 18 ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.
- 19 ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
2 Chronicles 15
- Details
- Parent Category: Old Testament
- Category: 2 Chronicles
2 ಪೂರ್ವಕಾಲವೃತ್ತಾ ಅಧ್ಯಾಯ 15