- 1 ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.
- 2 ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
- 3 ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- 4 ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
- 5 ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
- 6 ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- 7 ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
- 8 ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- 9 ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 10 ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- 11 ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
- 12 ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
- 13 ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
- 14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
- 15 ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
- 16 ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 17 ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.
- 18 ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
2 Kings 01
- Details
- Parent Category: Old Testament
- Category: 2 Kings
2 ಅರಸುಗಳು ಅಧ್ಯಾಯ 1