- 1 ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
- 2 ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
- 3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
- 4 ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
- 5 ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
- 6 ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
- 7 ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
- 8 ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
- 9 ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- 10 ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
- 11 ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
- 12 ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
- 13 ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
- 14 ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
- 15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- 16 ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
- 17 ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
- 18 ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
- 19 ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
- 20 ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
- 21 ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
- 22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
- 23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
- 24 ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.
- 25 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
2 Kings 02
- Details
- Parent Category: Old Testament
- Category: 2 Kings
2 ಅರಸುಗಳು ಅಧ್ಯಾಯ 2