- 1 ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.
- 2 ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
- 3 ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
- 4 ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
- 5 ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.
- 6 ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- 7 ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- 8 ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- 9 ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ.
- 10 ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- 11 ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
- 12 ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- 13 ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- 14 ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
- 15 ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- 16 ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- 17 ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
- 18 ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- 19 ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- 20 ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
- 21 ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
- 22 ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- 23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- 24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
- 25 ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
- 26 ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು.
- 27 ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
Amos 05
- Details
- Parent Category: Old Testament
- Category: Amos
ಆಮೋಸ ಅಧ್ಯಾಯ 5